ರಾಜ್ಯದಲ್ಲಿ ಮುಂಬರುವ ಚುನಾವಣೆಗಳಿಗೆ ಸಕಲ ಸಿದ್ದತೆಗಳನ್ನು ಬಿರುಸಿನಿಂದ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ, ಇವಿಎಂ ಮೂಲಕ ಮತದಾನ ಬದಲಾಗಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ʻಮತಚೋರಿʼ ಬಗ್ಗೆ ಗಂಭೀರ ಆರೋಪಗಳು ಕೇಳಿ ಬಂದಿರುವ ಬೆನ್ನಲ್ಲೇ, ಈ ಬೆಳವಣಿಗೆಯು ಪ್ರಸ್ತುತ ಚರ್ಚೆಗೀಡು ಮಾಡಿದೆ. ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಮತದಾನ ಪ್ರಕ್ರಿಯೆ ಬದಲಾಗಿ ಬ್ಯಾಲೆಟ್ ಪೇಪರ್ ಬಳಕೆ ಮಾಡುವುದು ತಪ್ಪೇನು ಎಂದು ಚುನಾವಣಾ ಆಯುಕ್ತ ಜಿ. ಎಸ್ ಸಂಗ್ರಶಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ವಿಶೇಷ ಕಾರಣ ಏನೂ ಇಲ್ಲ.