ಬೆಂಗಳೂರು: ರಾಜಧಾನಿಯ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘೋರ ಘಟನೆಯೊಂದು ಸಂಭವಿಸಿದೆ. ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಕೀರ್ತಿ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮದುವೆಯಾಗಿ ಎರಡೇ ವರ್ಷಕ್ಕೆ ಈ ದುರಂತ ಸಂಭವಿಸಿರುವುದು ಪೋಷಕರನ್ನು ಕಣ್ಣೀರಲ್ಲಿ ಮುಳುಗಿಸಿದೆ. ಘಟನೆಯ ಹಿನ್ನೆಲೆಮೃತ ಕೀರ್ತಿ ಹಾಗೂ ಗುರುಪ್ರಸಾದ್ ಅವರ ವಿವಾಹ ಎರಡು ವರ್ಷಗಳ ಹಿಂದೆ ಅದ್ಧೂರಿಯಾಗಿ ನೆರವೇರಿತ್ತು. ಮಗಳ ಭವಿಷ್ಯಕ್ಕಾಗಿ ಪೋಷಕರು ಕೈತುಂಬ ವರದಕ್ಷಿಣೆ ನೀಡಿ ಮದುವೆ ಮಾಡಿಕೊಟ್ಟಿದ್ದರು. ಆರಂಭದಲ್ಲಿ ಸುಗಮವಾಗಿದ್ದ ಸಂಸಾರದಲ್ಲಿ ಕಳೆದ ಎರಡು ತಿಂಗಳಿಂದ ಬಿರುಕು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಅನು