ಬೆಂಗಳೂರು: ಸ್ಯಾಂಡಲ್ವುಡ್ ನಟ ಮಯೂರ್ ಪಟೇಲ್ ಮದ್ಯದ ಅಮಲಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿರುವ ಘಟನೆ ಹಳೇ ಏರ್ಪೋರ್ಟ್ ರಸ್ತೆಯ ಕಮಾಂಡೋ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದೆ. ಈ ಅಪಘಾತದಲ್ಲಿ ನಾಲ್ಕು ಕಾರುಗಳು ಜಖಂಗೊಂಡಿದ್ದು, ಪೊಲೀಸರು ನಟನನ್ನು ವಶಕ್ಕೆ ಪಡೆದಿದ್ದಾರೆ.ನಡೆದಿದ್ದೇನು?ಬುಧವಾರ ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ನಟ ಮಯೂರ್ ಪಟೇಲ್ ತಮ್ಮ ಫಾರ್ಚೂನರ್ ಕಾರನ್ನು ತಾವೇ ಚಲಾಯಿಸಿಕೊಂಡು ಬರುತ್ತಿದ್ದರು. ಕಮಾಂಡೋ ಆಸ್ಪತ್ರೆ ಸಿಗ್ನಲ್ನಲ್ಲಿ ಕಾರುಗಳು ನಿಂತಿದ್ದವು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ಮಯೂರ್ ಪಟೇಲ್, ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದು ಮುಂದುಗಡೆ ನಿಂತಿದ್ದ ಕ